ಹೊಸದಿಗಂತ ಡಿಜಿಟಲ್ ಡೆಸ್ಕ್:
I.N.D.I.A ಒಕ್ಕೂಟ ಅಧಿಕಾರಕ್ಕೇರಿದರೆ ಸಿಎಎ ಕಾಯ್ದೆ ವಾಪಸ್ ಪಡೆಯಲಾಗುವುದು ಎಂದು ವ ಕಾಂಗ್ರೆಸ್ ನಾಯಕ ಶಶಿ ತರೂರ್ ವಾಗ್ದಾನ ನೀಡಿದ್ದಾರೆ.
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ.ಸಿಎಎ ಜಾರಿ ವಿರುದ್ಧ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದೆ. ಇದು ಮುಸ್ಲಿಮರ ವಿರುದ್ಧದ ಕಾಯ್ದೆ ಅನ್ನೋ ಆರೋಪಗಳೂ ಕೇಳಿಬಂದಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ನೈತಿಕವಾಗಿ ಹಾಗೂ ಸಾಂವಿಧಾನಿಕವಾಗಿ ತಪ್ಪು ನಿರ್ಧಾರವಾಗಿದೆ.ಭಾರತ ಜಾತ್ಯಾತೀತ ದೇಶವಾಗಿದೆ. ಧರ್ಮದ ಆಧಾರದಲ್ಲಿ ಪಾಕಿಸ್ತಾನ ವಿಭಜನೆಯಾಗಿದೆ. ಈ ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರೂ, ಮೌಲಾನಾ ಅಜಾದ್ ಸೇರಿದಂತೆ ಪ್ರಮುಖರು ಭಾರತ ಜಾತ್ಯಾತೀತ ರಾಷ್ಟ್ರವಾಗಿರಲಿದೆ ಎಂದಿದ್ದಾರೆ. ಹೀಗಿರುವಾಗ ಇದೀಗ ಪೌರತ್ವ ಕಾಯ್ದೆಯಲ್ಲಿ ಧರ್ಮ ಆಧಾರದಲ್ಲಿ ಪೌರತ್ವ ನೀಡುವುದು ಎಷ್ಟು ಸರಿ ಎಂದು ಶಶಿ ತರೂರ್ ಪ್ರಶ್ನಿಸಿದ್ದಾರೆ.
ಸಿಎಎ ಜಾರಿ ವಿರುದ್ದ ಯೂನಿಯನ್ ಮುಸ್ಲಿಮ್ ಲೀಗ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ಪ್ರತಿಕ್ರಿಯಿಸಿದ ಶಶಿ ತರೂರ್, ಮುಸ್ಲಿಮ್ ಲೀಗ್‌ಗೆ ಸಂಪೂರ್ಣ ಬೆಂಬಲವಿದೆ. ಕಾನೂನು ಹೋರಾಟದ ಮೂಲಕ ಆಗಿರುವ ತಪ್ಪನ್ನು ಸರಿಪಡಿಸಲಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಜನರು ಬೆಂಬಲಿಸಿದರೆ ಸುಲಭವಾಗಿ ಸಿಎಎ ವಾಪಸ್ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳ ಪೈಕಿ ಸಿಎಎ ವಾಪಸ್ ಕೂಡ ಸೇರಿಸಲಾಗುತ್ತದೆ. ಪೌರತ್ವದಲ್ಲಿ ನಾವು ಧರ್ಮವನ್ನು ತರುವುದಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.