ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣ ವಚನ ಬೋಧಿಸಿದರು.
ಕುರುಕ್ಷೇತ್ರದ ಸಂಸದ ಮತ್ತು ಒಬಿಸಿ ಸಮುದಾಯದ ಪ್ರಬಲ ನಾಯಕರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಹರಿಯಾಣ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೇಮಿಸಲಾಗಿತ್ತು.
2019 ರಿಂದ ರಾಜ್ಯವನ್ನು ಆಳಿದ ಆಡಳಿತಾರೂಢ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಬಿಜೆಪಿ-ಜೆಜೆಪಿ) ಮೈತ್ರಿಕೂಟದಲ್ಲಿ ಬಿರುಕುಗಳ ಮಧ್ಯೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದರು. ನಂತರ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.