ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ: 43 ಅಭ್ಯರ್ಥಿಗಳ ಹೆಸರು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿಲ್ಲ.

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಅಸ್ಸಾಂ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಗೌರವ್‌ ಗೊಗೋಯ್‌ ಅಸ್ಸಾಂ ಜೋರ್ಹತ್‌ನಿಂದ ಸ್ಪರ್ಧೆ ಮಾಡಲಿದ್ದರೆ, ಕಮಲ್‌ನಾಥ್‌ ಪುತ್ರ ನಕುಲ್‌ನಾಥ್‌ ಮಧ್ಯಪ್ರದೇಶದ ಚಿಂದ್ವಾರಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

‘ಸಿಇಸಿ ಸೋಮವಾರ ಸಭೆ ನಡೆಸಿ ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಸುಮಾರು 43 ಹೆಸರುಗಳ (ಲೋಕಸಭಾ ಅಭ್ಯರ್ಥಿಗಳ) ಪಟ್ಟಿಯನ್ನು ಬಿಡುಗಡೆ ಮಾಡಿದೆ’ ಎಂದು ಕಾಂಗ್ರೆಸ್ ನಾಯಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಇನ್ನು ಅಶೋಕ್‌ ಗ್ಲೆಹೋಟ್‌ ಪುತ್ರ ವೈಭವ್‌ ಗೆಹ್ಲೋಟ್‌ ರಾಜಸ್ಥಾನದ ಜಲೋರ್‌ನಿಂದ ಸ್ಪರ್ಧೆ ಮಾಡಲಿದ್ದಾರೆ.


ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!