ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ಕಟ್ಟುವ ಭಾಗವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ ಹೊರತು ಕೆಲವರ ಅಭಿಪ್ರಾಯದಂತೆ ಚುನಾವಣೆ ಗೆಲ್ಲಲು ಅಲ್ಲ, ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ಸಬರಮತಿ ಪ್ರದೇಶದಲ್ಲಿ ಮೋದಿ ಏಕಕಾಲಕ್ಕೆ ದೇಶದ 10 ವಂದೇಭಾರತ್ ರೈಲುಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವರು ನಮ್ಮ ಕೆಲಸವನ್ನು ಚುನಾವಣೆಯ ದೃಷ್ಟಿಯಲ್ಲಿ ನೋಡುತ್ತಾರೆ. ಆದರೆ ನಾನು ಒಂದು ವಿಷಯವನ್ನು ಹೇಳಲು ಬಯಸುತ್ತೇನೆ ನಾವು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳು ದೇಶಕಟ್ಟುವ ಅಭಿಯಾನದ ಭಾಗವಾಗಿದೆಯೇ ಹೊರತು ಸರ್ಕಾರ ರಚನೆಯಲ್ಲ ಎಂದರು.
ಹಿಂದಿನ ತಲೆಮಾರುಗಳು ಅನುಭವಿಸಿದ ಸಮಸ್ಯೆಗಳನ್ನು ಇಂದಿನ ಯುವಕರು ಎದುರಿಸದಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ. ಇದುವೇ ಮೋದಿ ಗ್ಯಾರಂಟಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.