ಪ್ರತಿಷ್ಠಿತ ಗೀತಂ ವಿವಿ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರದ ಕರ್ನೂಲ್ ಮೂಲದ ವಿದ್ಯಾರ್ಥಿ ದಾಸರಿ ಬ್ರಹ್ಮಸಾಯಿರೆಡ್ಡಿ ನಿನ್ನೆ ರಾತ್ರಿ ಊಟದ ನಂತರ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದ ದಾಸರಿ ಬ್ರಹ್ಮಸಾಯಿ ರೆಡ್ಡಿ ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!