ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಹರಿಯಾಣ ಮಾಜಿ ಸಿಎಂ ಮನೊಹರ್​ ಲಾಲ್​ ಖಟ್ಟರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮಾಜಿ ಸಿಎಂ ಮನೊಹರ್​ ಲಾಲ್​ ಖಟ್ಟರ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಹರಿಯಾಣ ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಖಟ್ಟರ್​, ನಾನು ಇಂದು (ಮಾರ್ಚ್​ 13) ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.ಇಂದಿನಿಂದ ಕರ್ನಾಲ್​ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನಯಾಬ್​ ಸಿಂಗ್​ ಸೈನಿ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದ್ದು, ಇದರ ಬೆನ್ನಲ್ಲೇ ಮನೋಹರ್ ಲಾಲ್​ ಖಟ್ಟರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತ ಮನೋಹರ್​ ಲಾಲ್​ ಖಟ್ಟರ್​ ಅವರನ್ನು ಬಿಜೆಪಿ ಕರ್ನಾಲ್​ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!