ಹೊಸದಿಗಂತ ವರದಿ, ಮಡಿಕೇರಿ:
ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಅಸ್ಸಾಂ ಮೂಲದ ಅಜಬಾನು(37) ಎಂದು ಗುರುತಿಸಲಾಗಿದೆ.
ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟದಲ್ಲಿ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಈ ಸಂದರ್ಭ ಗಂಭೀರ ಗಾಯಗೊಂಡ ಮಹಿಳೆಯನ್ನು ಪಾಲಿಬೆಟ್ಟ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾಳೆ.
ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಕಾರ್ಮಿಕರು ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.