ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದಿಂದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಚುನಾವಣಾ ಆಯೋಗ ಪಡೆದಿದೆ. ಸರಿಯಾದ ಸಮಯದಲ್ಲಿ ವಿವರ ಹಂಚಿಕೊಳ್ಳಲಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬುಧವಾರ ಹೇಳಿದ್ದಾರೆ.
2019ರ ಏಪ್ರಿಲ್ 12 ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಹೀಗಾಗಿ ಇಂದು ಮಾಹಿತಿಯನ್ನು ಚುನಾವಣಾ ಆಯೋಗ ಪಡೆದಿದೆ.
ಸುಪ್ರೀಂ ಕೋರ್ಟ್‌ನ ಆದೇಶದಂತೆ ಮಾರ್ಚ್ 12 ರ ಸಂಜೆಯೊಳಗಾಗಿ ಚುನಾವಣಾ ಬಾಂಡ್ ಪಡೆದವರ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದೆ. ವಿವರವನ್ನು ಪರಿಶೀಲಿಸಿ ಖಂಡಿತವಾಗಿಯೂ ಸರಿಯಾದ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.