ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಗೀತಾ ಕಾಲೋನಿಯ ನಾಲ್ಕು ಅಂತಸ್ತಿನ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಪಾರ್ಕಿಂಗ್ನಿಂದ ಬೆಂಕಿ ಹೊತ್ತಿದ್ದು,ಇಡೀ ಕಟ್ಟಡ ಬೆಂಕಿಗೆ ಆಹುತಿಯಾಗಿದೆ. ಅಕ್ಕಪಕ್ಕದ ಮನೆಯವರು ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ್ದಾರೆ.
ಅಪಘಾತದಲ್ಲಿ ಮನೋಜ್ ಸುಮನ್ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ ಕಾರಣ ಕುಟುಂಬ ನಿದ್ದೆಯಲ್ಲಿತ್ತು ಎನ್ನಲಾಗಿದೆ.