‘ಕೈ’​ಗೆ ಮತ್ತೊಂದು ಹೊಡೆತ: ಪಂಜಾಬ್​ ನ​ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್​ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇದಕ್ಕೂ ಮುನ್ನ ಪಟಿಯಾಲಾ ಸಂಸದೆ ಪ್ರಣೀತ್ ಕೌರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮುಖ್ಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.

ಪ್ರಣೀತ್​ ಕೌರ್ ಪಂಜಾಬ್‌ನ ಪಟಿಯಾಲ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅವರಿಗೆ ಬಿಜೆಪಿ ಪಟಿಯಾಲ ಕ್ಷೇತ್ರವನ್ನು ನೀಡಬಹುದು ಎಂದು ಹೇಳಲಾಗಿದೆ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!