Monday, January 12, 2026

ರಾಷ್ಟ್ರ ರಾಜಧಾನಿಯಲ್ಲಿ ತ್ರಿಬಲ್‌ ಮರ್ಡರ್: ತಾಯಿ, ತಂಗಿ, ತಮ್ಮನನ್ನು ಕೊಂದು ಪೊಲೀಸರಿಗೆ ಶರಣಾದ ಆರೋಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಲಕ್ಷ್ಮಿ ನಗರದಲ್ಲಿ ತಾಯಿ, ತಂಗಿ ಹಾಗೂ ತಮ್ಮನನ್ನು ಕೊಲೆಗೈದು ಆರೋಪಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ನಡೆದಿದೆ.

ಆರೋಪಿಯನ್ನು ಮಂಗಲ್ ಬಜಾರ್ ಪ್ರದೇಶದ ನಿವಾಸಿ ಯಶ್ವೀರ್ ಸಿಂಗ್ (25) ಎಂದು ಗುರುತಿಸಲಾಗಿದ್ದು, ತಾಯಿ ಕವಿತಾ (46), ಸಹೋದರಿ ಮೇಘನಾ (24) ಮತ್ತು ಸಹೋದರ ಮುಕುಲ್ (14) ಮೂವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ನಡೆದ ದಿನ, ಆರೋಪಿ ಮೂವರನ್ನು ಕೊಲೆ ಮಾಡಿ, ಬಳಿಕ ಲಕ್ಷ್ಮಿ ನಗರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೂರು ಶವಗಳನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈವರೆಗೂ ಆರೋಪಿ ತನ್ನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಕ್ಕೆ ಕಾರಣ ತಿಳಿದುಬಂದಿಲ್ಲ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!