ಪ್ರಧಾನಿ ಮೋದಿಗೆ ಜೀವ ಬೆದರಿಕೆ ಹಾಕಿದ್ದ ತಮಿಳುನಾಡು ಸಚಿವನ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ತಮಿಳುನಾಡು (Tamil Nadu) ಸಚಿವನ ವಿರುದ್ಧ ದೆಹಲಿಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕಾ ಸಚಿವ ಎಂ ಅನ್ಬರಸನ್ (Anbarasan), ನಾನು ಸಚಿವನಾಗಿದ್ದರಿಂದ ನಾನು ನನ್ನನ್ನು ನಿಯಂತ್ರಿಸುತ್ತಿದ್ದೇನೆ. ಇಲ್ಲದಿದ್ದರೆ ನಾನು ನಿಮ್ಮನ್ನು ತುಂಡು ಮಾಡುತ್ತೇನೆ ಎಂದು ಮೋದಿ ವಿರುದ್ಧ ಹೇಳಿಕೆ ನೀಡಿದ್ದರು.

ಸುಪ್ರೀಂ ಕೋರ್ಟ್ ವಕೀಲ ಸತ್ಯ ರಂಜನ್ ಸ್ವೈನ್ ಅವರ ದೂರಿನ ಆಧಾರದ ಮೇಲೆ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅನ್ಬರಸನ್ ನೀಡಿರುವ ಬೆದರಿಕೆ ಹೇಳಿಕೆಯು ಆತಂಕಕಾರಿ ಮತ್ತು ನಮ್ಮ ಪ್ರಧಾನಿಯ ಸುರಕ್ಷತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ. ನಮ್ಮ ರಾಷ್ಟ್ರದ ಶಾಂತಿ, ಸ್ಥಿರತೆಯನ್ನು ಕದಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಬಹಿರಂಗವಾಗಿ ಬೆದರಿಕೆ ಹಾಕಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 268 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 503 (ಅಪರಾಧ ಬೆದರಿಕೆ), 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿ ಎಫ್‌ಐಆರ್‌ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!