ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ. ಈ ವೇಳೆ ದೆಹಲಿಯ 5,000 ಬೀದಿ ವ್ಯಾಪಾರಿಗಳು ಸೇರಿದಂತೆ 1 ಲಕ್ಷ ಬೀದಿ ವ್ಯಾಪಾರಿಗಳಿಗೆ ಯೋಜನೆಯಡಿ ಸಾಲ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಪ್ರಧಾನಿ ಮೋದಿ,ಇಂದಿನ ಕಾರ್ಯಕ್ರಮ ಪ್ರಧಾನಮಂತ್ರಿ ಸ್ವನಿಧಿ ಮಹೋತ್ಸವವು ನಮ್ಮ ಸುತ್ತಮುತ್ತ ಇರುವವರಿಗೆ ಸಮರ್ಪಿತವಾಗಿದೆ. ಅವರಿಲ್ಲದೆ ನಾವು ನಮ್ಮ ಜೀವನವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಕೋವಿಡ್ ಸಮಯದಲ್ಲಿ ಈ ಬೀದಿ ವ್ಯಾಪಾರಿಗಳ ಶಕ್ತಿಯನ್ನು ನಾವು ನೋಡಿದ್ದೇವೆ .ಇಂದು, ನಾನು ಈ ಸಮಾರಂಭದಲ್ಲಿ ನಮ್ಮ ಪ್ರತಿಯೊಬ್ಬ ಬೀದಿ ವ್ಯಾಪಾರಿಗಳು ಮತ್ತು ರಸ್ತೆ ಬದಿಯಲ್ಲಿ ಮಾರಾಟ ಮಾಡುವವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಹಿಂದಿನ ಸರ್ಕಾರಗಳು ಬೀದಿ ಬದಿ ವ್ಯಾಪಾರಿಗಳ ಬಗ್ಗೆ ಎಂದಿಗೂ ಕಾಳಜಿ ವಹಿಸಲಿಲ್ಲ.ಬ್ಯಾಂಕ್ ಸಾಲಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅತಿಯಾದ ಬಡ್ಡಿದರದಲ್ಲಿ ಬಂಡವಾಳವನ್ನು ಪಡೆಯಬೇಕಾಗಿರುವುದರಿಂದ ಅವರು ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ಓಡಬೇಕಾಗಿತ್ತು. ಆದ್ರೆ ‘ಮೋದಿಯವರ ಗ್ಯಾರಂಟಿ’ ಯಿಂದಾಗಿ ಅವರು ಸರಳ ದರದಲ್ಲಿ ಬ್ಯಾಂಕ್‌ಗಳಿಂದ ಸಾಲವನ್ನು ಪಡೆಯಬಹುದು. 62 ಲಕ್ಷಕ್ಕೂ ಹೆಚ್ಚು ಜನರಿಗೆ ಸುಮಾರು 11,000 ಕೋಟಿ ಸಾಲ ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.