ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾಜಿ ಅಥ್ಲೀಟ್ ಪದ್ಮಿನಿ ಥಾಮಸ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ತಿರುವನಂತಪುರಂನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದ ಪದ್ಮಿನಿ ಥಾಮಸ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಸೇರಿದಂತೆ ಹಿರಿಯರು ಬರಮಾಡಿಕೊಂಡರು.
ಪದ್ಮಿನಿ ಥಾಮಸ್ 1982ರ ಏಷ್ಯನ್ ಕ್ರೀಡಾಕೂಟದ ಬೆಳ್ಳಿ ಮತ್ತು ಕಂಚು ಪದಕ ವಿಜೇತೆ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತರು.
ಬಿಜೆಪಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಪದ್ಮಿನಿ, ಕಾಂಗ್ರೆಸ್ ಪಕ್ಷದಲ್ಲಿ ನಾನು ಭಾವನಾತ್ಮಕವಾಗಿ ಹಾಗೂ ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದ ಕಾರಣ ಬಿಜೆಪಿ ಸೇರಲು ಪ್ರೇರಣೆ ನೀಡಿತ್ತು. ನಾನು ಯಾವುದೇ ಆಕಾಂಕ್ಷೆ ಇಲ್ಲದೆ ಮೋದಿ ಅವರ ಸರ್ಕಾರವು ಮಹಿಳೆಯರಿಗೆ ನೀಡಿದ ಆದ್ಯತೆ ಮತ್ತು ಮೀಸಲಾತಿಯಿಂದ ನಾನು ಪ್ರಭಾವಿತಳಾಗಿ ಬಿಜೆಪಿ ಸೇರಿದ್ದೇನೆ ಎಂದು ಹೇಳಿದ್ದಾರೆ.