ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಿಚಕ್ರವಾಹನ ಮತ್ತು ಟಂಟಂ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ನಡೆದಿದೆ.
ಟಂಟಂ ವಾಹನದಲ್ಲಿದ್ದ ಈರಪ್ಪ ಪವಾಡಗೌಡ (45) ಹಾಗೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.