ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ಜಲಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 15 ಭಾರತೀಯರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ.
ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ವಶಕ್ಕೆ ಪಡೆದು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ.
ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುತ್ತದೆ. ಈ ಪ್ರದೇಶದಲ್ಲಿ ಎರಡೂ ದೇಶಗಳ ಮೀನುಗಾರರಿಗೆ ಹೆಚ್ಚೆಚ್ಚು ಮೀನು ಸಿಗುತ್ತವೆ.