ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿಗೆ ಬೆಂಗಳೂರಲ್ಲಿ ಮತ್ತೊಂದು ಜೀವ ಬಲಿಯಾಗಿದ್ದು, ವೇಗವಾಗಿ ಬಂದ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಸ್ ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಚೇತನ್ (35) ಎಂಬುವವರು ಮೃತಪಟ್ಟಿದ್ದಾರೆ.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಚೇತನ್ ರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಸ್ ಚಾಲಕ ಶಿವಕುಮಾರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.