ಹೊಸದಿಗಂತ ವರದಿ,ಮೈಸೂರು:
ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡು ಹಂದಿಯೊoದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಮೊತ್ತ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮತ್ತಿಕೆರೆ ಹಾಡಿಯ ಮರಿಯಯ್ಯ ದಾಳಿಗೊಳಗಾದ ಕಾರ್ಮಿಕ. ಘಟನೆಯಲ್ಲಿ ಮರಿಯಯ್ಯ ಅವರ ಕೈಕಾಲು ಮೂಳೆಗಳು ಮುರಿದಿದ್ದು, ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.