October 5, 2026
Monday, October 5, 2026
spot_img

WEATHER | ರಾಜ್ಯದಲ್ಲಿ ಹೆಚ್ಚಾಗ್ತಿದೆ ಚಳಿಚಳಿ ಫೀಲಿಂಗ್‌, ಇಂದು ಕೂಡ ಹಲವೆಡೆ ಒಣ ಹವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ.

ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

Must Read