ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲನೆ ಮಾಡುವಾಗ ಸ್ವಲ್ಪ ಪ್ರಜ್ಞೆ ತಪ್ಪಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಚಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಫ್ಲೈ ಓವರ್ ನಿಂದ ಕೆಳಗೆ ಬಿದ್ದಿದೆ. ಚಾಲಕ ಕಾರನ್ನು ಬಿಟ್ಟು, ಮೇಲಿನಿಂದ ಬಿದ್ದು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ. ಮದ್ದೂರು ತಾಲೂಕಿನ ಕಸ್ತೂರು ಗ್ರಾಮದ ಅಭಿಷೇಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ.
ಮೇಲ್ಸೇತುವೆಯಲ್ಲಿ ಅತಿ ವೇಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯಿಂದ ಪಲ್ಟಿಯಾಗಿ ಕೆಳಸೇತುವೆಗೆ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಏರ್‌ಬ್ಯಾಗ್ ಓಪನ್ ಆಗಿದ್ದು, ಸ್ಟೇರಿಂಗ್ ಹೊರಗೆ ಬಂದಿದೆ. ಕಾರು ಅಂಡರ್‌ಪಾಸ್‌ಗೆ ಬಿದ್ದಾಗ ಅಲ್ಲಿ ಇತರೆ ವಾಹನ ಇರಲಿಲ್ಲ. ಹೀಗಾಗಿ ಮತ್ತೊಂದು ಅವಘಡ ತಪ್ಪಿದೆ ಎನ್ನಲಾಗಿದೆ.