ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಇಂದಿರಾಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಳೆ ಮಧ್ಯಾಹ್ನ 3 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ ದಾವಣಗೆರೆಯ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
1972, 1978, 1989ರಲ್ಲಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್, ಬಂಗಾರಪ್ಪ, ಮೊಯ್ಲಿ ಸಂಪುಟದಲ್ಲಿ ಸಚಿವೆ ಆಗಿ ಸೇವೆ ಮಾಡಿದ್ದಾರೆ. ಬೃಹತ್ ಕೈಗಾರಿಕೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ವಿಧಾನಸಭೆಯ ಉಪಸಭಾಪತಿಯಾಗಿ ಸೇವೆ ಸಲ್ಲಿದ್ದಾರೆ.