ಉಚಿತ ಪಂಚ ಗ್ಯಾರಂಟಿಗಳ ವಿರುದ್ಧ ಮಾತಿನಲ್ಲೇ ಗದಾ ಪ್ರಹಾರ ಮಾಡಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದ ಲೋಕಸಭೆಗೆ ರಣ ಕಹಳೆ ಮೊಳಗಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಉಚಿತ ಭರವಸೆಗಳನ್ನು ನೀಡುತ್ತಿದೆ ಎಂದು ಟೀಕಿಸಿದ ಪ್ರಧಾನಿ ಮೋದಿ, ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಸುಧಾರಿಸಲು ಕೇಂದ್ರದ ಅನೇಕ ಯೋಜನೆಗಳೇ ಮೋದಿ ಗ್ಯಾರಂಟಿ ಎಂದು ಹೇಳಿದರು.

ಕಲಬುರಗಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಸಾರ್ವಜನಿಕ ಸಭೆಯಲ್ಲಿ 10-15 ನಿಮಿಷಗಳ ರೋಡ್ ಶೋ ನಡೆಸಿ ನೆರೆದಿದ್ದ ಜನರನ್ನುದ್ದೇಶಿಸಿ ‘ ಅಬ್‌ ಕಿ ಬಾರ್‌- ಚಾರ್‌ ಸೌ ಪಾರ್‌’ ಎಂದು ಘೋಷಣೆ ಕೂಗಿದರು.

ಕಾಂಗ್ರೆಸ್ ನ ಐದು ಗ್ಯಾರಂಟಿಗಳಿಗೆ ಪ್ರತಿಯಾಗಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಮೋದಿ, ಕೆಲವು ಪ್ರಮುಖ ಯೋಜನೆಗಳು ಮತ್ತು ಪ್ರಯೋಜನಗಳ ಸಂಖ್ಯೆಯನ್ನು ಪ್ರಸ್ತಾಪಿಸಿದರು ಮತ್ತು ಸಾಧನೆಗಳನ್ನು ಖಾತರಿಪಡಿಸಿದಾಗ ಅಭಿವೃದ್ಧಿ ಸಾಧ್ಯ ಹೊರತು ಉಚಿತ ಖಾತರಿಯಿಂದಲ್ಲ ಎಂದು ಕಾಂಗ್ರೆಸ್‌ಗೆ ತಮ್ಮ ಮಾತಿನಲ್ಲೇ ಗದಾ ಪ್ರಹಾರ ಮಾಡಿದರು ಮೋದಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!