ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲದಿದ್ದರೆ ಈ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಓಹಿಯೋದ ಡೇಟನ್ ಬಳಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅಧ್ಯಕ್ಷ ಟ್ರಂಪ್, ಈ ಬಾರಿ ನಾನು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲದಿದ್ದರೆ ರಕ್ತಪಾತವಾಗುತ್ತದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ನಾನು ಪುನರಾಯ್ಕೆಯಾದರೆ, ಚೀನಾವು ಅಮೆರಿಕಕ್ಕೆ ಯಾವುದೇ ಕಾರುಗಳನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಯುಎಸ್ ಅಧ್ಯಕ್ಷ ಜೋ ಬೈಡೆನ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಅಧ್ಯಕ್ಷೀಯ ನಾಮನಿರ್ದೇಶನಗಳನ್ನು ಪಡೆದಿದ್ದಾರೆ. ಈ ಮೂಲಕ ಇಬ್ಬರೂ ಅಧ್ಯಕ್ಷೀಯ ಸ್ಪರ್ಧೆಗೆ ಮರಳಿದ್ದು, ಇಬ್ಬರ ನಡುವೆ ಭಾರೀ ಪೈಪೋಟಿ ಶುರುವಾಗಿದೆ.