ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಾಹೀದ್ ಪಠಾಣ್ (30), ಶಾಕೀರ್ (20) ಮೃತಪಟ್ಟವರು, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವೀಫ್ಟ್ ಮತ್ತು ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಸ್ವೀಫ್ಟ್ ನಲ್ಲಿದ್ದ ಮೂವರು ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಉತ್ತರ ಪ್ರದೇಶದವರಾಗಿದ್ದು, ಜವಳಿ ವ್ಯಾಪಾರ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ವೇಗವಾಗಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.