ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದೆ ಸುಮಲತಾ ಅಂಬರೀಷ್ ದಿಢೀರ್ ದಿಲ್ಲಿಗೆ ತೆರಳಿದ್ದು, ರಾಜಕೀಯ ಪಡಸಾಲೆಯಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಶನಿವಾರವಷ್ಟೇ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ಸುಮಲತಾ, ದಿಲ್ಲಿಗೆ ಬರುವಂತೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನವೇ ತೆರಳಿದ್ದಾರೆ. ಈ ನಡುವೆ ಅವರು ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.