ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.
ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿರಬಹುದು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಂಟಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಿದೆ. ಡಿ ಮಾರ್ಟ್ ಮತ್ತಿತರ ಸೂಪರ್ ಮಾರ್ಕೆಟ್‌ಗಳಿಂದ ಸಾಗಿಸುವ ಸಾಮಾನುಗಳು ಗೋದಾಮಿನಲ್ಲಿತ್ತು. ಕೊತ್ತನೂರು ಠಾಣಾವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.