ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ಆರ್ಸಿಬಿ ಮಹಿಳೆಯರ ತಂಡ ರೋಚಕ ಗೆಲುವು ಸಾಧಿಸಿ ಕ್ರೀಡಾಭಿಮಾನಿಗಳಿಗೆ ಖುಷಿ ನೀಡಿದೆ.
ಸಿಎಂ ಸಿದ್ದರಾಮಯ್ಯ ಕೂಡ ನಾನು ಕ್ರಿಕೆಟ್ ಪ್ರೇಮಿ, ನನಗೆ ಖುಷಿಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಟ್ವೀಟ್ ಮೂಲಕ ಸಿಎಂ ಅಭಿನಂದನೆ ಸಲ್ಲಿಸಿದ್ದು, ಬಾಯ್ಸ್ ಟೀಮ್ ಕೂಡ ಬೇಗ ಗೆಲುವು ಸಾಧಿಸಲು ಎಂದು ಹೇಳಿದ್ದಾರೆ.
ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು… pic.twitter.com/39HqqJyjVs
— Siddaramaiah (@siddaramaiah) March 17, 2024