ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದು, ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು.
ಪ್ರಧಾನಿ ಮೋದಿಯ ಬೃಹತ್ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಘಟಾನಘಟಿ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತರಿದ್ದಾರೆ.
ಇದರ ಜೊತೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್, ದಾವಣಗೆರೆ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಉಪಸ್ಥಿತಿರಿದ್ದಾರೆ.