ಹೊಸದಿಗಂತ , ಗಂಗಾವತಿ:
ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 32.92 ಲಕ್ಷ ರೂ. ಹಣವನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನಿಂದ ಹೊಸಪೇಟೆಗೆ ಪೀರಸಾಬ್ ಎನ್ನುವ ವ್ಯಕ್ತಿ ಹಣ ತೆಗೆದುಕೊಂಡು ಹೋಗುತ್ತಿದ್ದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಗಂಗಾವತಿ ತಾಲ್ಲೂಕಿನ ಕಡೆಬಾಗಿಲು ಗ್ರಾಮದ ಚೆಕ್ ಪೋಸ್ಟ್ ಬಳಿ ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆಯಲಾಗಿದೆ.