ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ನಡೆದ ಕಾಂಗ್ರೆಸ್‌ನ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಉಖ್ರುಲ್‌ನ ಕಾಂಗ್ರೆಸ್ ಭವನದಲ್ಲಿ ಎಂಪಿಸಿಸಿ ಅಧ್ಯಕ್ಷ ಕೆ. ಮೇಘಚಂದ್ರ ಮಾತನಾಡಿದ್ದು, ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದ ಅಭ್ಯರ್ಥಿ ಆಲ್ಫ್ರೆಡ್ ಪ್ರಚಾರ ನಡೆಸುತ್ತಿದ್ದಾರೆ. ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ನಡೆದಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.