ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಎಲೆಕ್ಟ್ರಿಕ್​​ ಸ್ಕೂಟರ್​ ಜೊತೆ ಬೈಕ್, ಕಾರು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲೆಕ್ಟ್ರಿಕ್ ಸ್ಕೂಟರ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು. ಚಾರ್ಜಿಂಗ್ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ. ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ ತಗುಲಿದಾಗ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ.

ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ವಾಹನ ಕುಂಬಾರಕೊಪ್ಪಲಿನ ಗುಂಡಪ್ಪ ಎಂಬುವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಕಿಯಿಂದ ಮನೆಗೂ ಹಾನಿಯಾಗಿದೆ ಎಂದು ವರದಿಯಾಗಿದೆ.

ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here