ಹೊಸದಿಗಂತ ,ಹಾಸನ:
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಹಾಸನ ಲೋಕಸಭಾದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಬಿಜೆಪಿ ನಿಷ್ಠಾವಂತ ಮುಖಂಡರ ಮನೆಗೆ ಭೇಟಿ ನೀಡಿ ಬೆಂಬಲ ಬಯಸುತ್ತಿದ್ದಾರೆ.
ಆರ್ಎಸ್ಎಸ್ ಹಿನ್ನೆಲೆ ಇರುವ ಹಾಗೂ ಆರಂಭದಿಂದಲೂ ಕಟ್ಟಾ ಬಿಜೆಪಿ ಬೆಂಬಲಿತ, ಪ್ರಮುಖ ಮುಖಂಡರ ಮನೆಗೆ ತೆರಳಿ ಮಾತುಕತೆ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ.
25 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುತ್ತಿದೆ. ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಬೆಂಬಲ ನೀಡುವಂತೆ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ಹಾಸನ, ಸಕಲೇಶಪುರ, ಆಲೂರು ಭಾಗದ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾಜಿಶಾಸಕ ಪ್ರೀತಂಗೌಡ ಬೆಂಬಲ ನೀಡಲು ಇನ್ನೂ ನಿರ್ಧರಿಸದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.