ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸದ್ಗುರು ಜಗ್ಗಿ ವಾಸುದೇವ ಅವರು ಶೀಘ್ರ ಚೇತರಿಸುವಂತಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿ, ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿರುವ ಗುರು ಸದ್ಗುರು ಶೀಘ್ರ ಚೇರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ನನ್ನ ಪ್ರಾರ್ಥನೆ ಯಾವತ್ತೂ ಸದ್ಗುರು ಜೊತೆ ಹಾಗೂ ಅವರ ಅನುಯಾಯಿಗಳ ಜೊತಗಿದೆ. ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ಸಮಾಜಮುಖಿ ಕೆಲಸಮಾಡುವಂತಾಗಲಿ ಎಂದು ಬರೆದುಕೊಂಡಿದ್ದಾರೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಸದ್ಗುರು ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ. ಟೀಂ ಇಂಡಿಯಾ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ವಿರೇಂದ್ರ ಸೆಹ್ವಾಗ್ ಸಹಿತ ಹಲವು ಕ್ರಿಕೆಟಿಗರು, ಕ್ರೀಡಾಪಟುಗಳು ಸದ್ಗುರು ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಇದಲ್ಲದೆ ಕೇಂದ್ರ ಸಚಿವರು, ರಾಜ್ಯ ನಾಯಕರು ಸೇರಿದಂತೆ ಹಲವರು ಸದ್ಗುರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.