IPL | ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ನಡುವಿನ ಮುನಿಸು ದೂರಾದೂರ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ ಅಂತೂ ಇಂತು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನೆಟ್ಸ್​​ನಲ್ಲಿ ಇಬ್ಬರು ಆಟಗಾರರು ಒಟ್ಟಿಗೆ ಅಭ್ಯಾಸ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ವೀಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ಬಂದು ರೋಹಿತ್ ಶರ್ಮಾ ಅವರನ್ನು ಅಪ್ಪಿಕೊಂಡಿದ್ದಾರೆ. ನಂತರ ರೋಹಿತ್ ಶರ್ಮಾ ಪಾಂಡ್ಯ ಅವರನ್ನು ತಬ್ಬಿಕೊಂಡಿರುವುದು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಈ ವೀಡಿಯೋ ತುಂಬಾ ಖುಷಿ ಕೊಟ್ಟಿದ್ದು ಇವರಿಬ್ಬರ ಮುನಿಸು ಕಡಿಮೆಯಾದಂತಿದೆ ಎನ್ನಲಾಗಿದೆ.

ನಾಳೆಯಿಂದ ಐಪಿಎಲ್ ಸಂಭ್ರಮ ಶುರುವಾಗಲಿದೆ. ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

 

View this post on Instagram

 

A post shared by Mumbai Indians (@mumbaiindians)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!