ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಜೈಪುರದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ.
ಏಕಾಏಕಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆಯಲ್ಲಿ ಬೆಂಕಿ ಹೊತ್ತುಕೊಂಡಿದೆ.ಹೊಗೆ ಹಾಗೂ ಬೆಂಕಿಯಿಂದಾಗಿ ಯಾರಿಗೂ ಹೊರಬರಲು ಸಾಧ್ಯವಾಗಿಲ್ಲ, ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಸ್ಥಳೀಯರು ಕರೆ ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.