ಹೊಸದಿಗಂತ ವರದಿ,ಹಾಸನ:
ವಿಪರೀತ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕಿ ಚಿಕತ್ಸೆ ಫಲಕಾರಿಯಾಗದೇ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಮೃತಳಾಗಿದ್ದು ಡೆಂಗ್ಯೂ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.
ಸಾತ್ವಿಕಾ (೭) ಮೃತ ಬಾಲಕಿ ಎರಡನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ನಗರದ ಖಾಸಗಿ ನರ್ಸಿಂಗ್ ಹೋಂಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಬಾಲಕಿಗೆ ಜ್ವರ ತೀರಾ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆವಿದೆ ಎಂಬ ವೈದ್ಯರ ಸಲಹೆ ಮೇರೆಗೆ ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ.
ಬಾಲಕಿ ಸಾವಿನಿಂದಾಗಿ ಆಕೆ ಓದುತ್ತಿದ್ದ ಶಾಲೆಯಲ್ಲಿ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿದ ಆಡಳಿತ ಮಂಡಳಿಯವರು ವಿದ್ಯಾರ್ಥಿನಿ ಗೌರವಾರ್ಥ ಒಂದು ದಿನದ ರಜೆ ಘೋಷಣೆ ಮಾಡಿದರು.