ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.
ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಕೇಜ್ರಿವಾಲ್ ಗೆ ಬಂಧನದಿಂದ ರಕ್ಷಣೆ ನೀಡಲು ಗುರುವಾರ ದೆಹಲಿ ಹೈಕೋರ್ಟ್ ನಿರಾಕರಿಸಿತ್ತು.
ಇದರ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.