ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರಾವಳಿ ಸಹಿತ ರಾಜ್ಯದ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಉತ್ತರ ಒಳನಾಡಿನ ಕೊಪ್ಪಳ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚು ದಾಖಲಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯೆಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.