ತಲಕಾವೇರಿಯಿಂದ ಚುನಾವಣಾ ಪ್ರಚಾರ ಆರಂಭಿಸಿದ ಯದುವೀರ್

ಹೊಸದಿಗಂತ ವರದಿ ಮಡಿಕೇರಿ:

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಶುಕ್ರವಾರ ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಕೊಡಗಿನಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು.
ಇದಕ್ಕೂ ಮೊದಲು ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಅವರು, ಬಳಿಕ ಭಗಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ‌ ಪಕ್ಷದ ವಿವಿಧ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದು, ಯದುವೀರ್ ಅವರ ಗೆಲುವಿಗಾಗಿ ಪ್ರಾರ್ಥಿಸಿದರು.

ಪೂಜೆಯ ಬಳಿಕ ಯದುವೀರ್ ಹಾಗೂ ಇತರರು ಚೇರಂಬಾಣೆ, ಸಂಪಾಜೆ,ಮೂರ್ನಾಡು ಸೇರಿದಂತೆ ವಿವಿಧೆಡೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!