ಹೊಸದಿಗಂತ ವರದಿ ಗದಗ:
ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ-ಮೇಲೆ ಕರೆಯಿಂದ ನ್ಯಾಯಾಧೀಶರು, ಅಧಿಕಾರಿಗಳು, ಸಿಬ್ಬಂದಿಗಳು ಆತಂಕಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬ್ಲಾಸ್ಟ್ ಮಾಡೋದಾಗಿ ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ ನ್ಯಾಯಾಧೀಶರಿಗೆ ಇ-ಮೇಲ್ ಬಂದಿದೆ. ಮಧ್ಯಾಹ್ನದ 1:55 ರ ವೇಳೆಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಮೇಲ್ ಬಂದಿದೆ. ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಸಿಬ್ಬಂದಿಗಳು ಭಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಲ್ಲರು ನ್ಯಾಯಾಲಯದಿಂದ ಹೊರಗೆ ಬಂದಿದ್ದಾರೆ.
ಇದನ್ನೂ ಓದಿ: FOOD | ನುಗ್ಗೆಕಾಯಿಯಿಂದ ಗ್ರೇವಿ ಕೂಡ ಮಾಡಬಹುದು, ಹೇಗೆ ನೋಡಿ..
ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಎಸ್ಪಿ ರೋಹನ್ ಜಗದೀಶ್ ತನಿಖೆ ನಡೆಸಿದ್ದಾರೆ.

