ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಿಂದ ಟಿಕೆಟ್ ಸಿಗುತ್ತದೆ ಎಂದೆ ಆಸೆ ಇಟ್ಟುಕೊಂಡಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿಗೆ ಭಾರೀ ನಿರಾಸೆಯಾಗಿದೆ.
ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ರಕ್ಷಿತಾ ಗಳಗಳನೆ ಅತ್ತಿದ್ದಾರೆ. ಎಂಟು ವರ್ಷಗಳಿಂದ ಸಾಕಷ್ಟು ಕಷ್ಟಪಟ್ಟಿದ್ದೇನೆ, ಸಂಸದೆಯಾಗುವ ಕನಸು ನುಚ್ಚು ನೂರಾಗಿದೆ.
ಟಿಕೆಟ್ ಸಿಗದಿರುವುದು ನೋವು ನಂದಿದೆ, ಆದರೆ ನಮ್ಮ ನಾಯಕರ ಮೇಲೆ ನಂಬಿಕೆ ಕಳೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ನನ್ನ ಕೈ ಹಿಡಿಯುತ್ತಾರೆ ಎನ್ನುವ ಭರವಸೆ ಇದೆ. ಪಕ್ಷಕ್ಕೆ ಸದಾ ನಿಷ್ಠೆಯಿಂದ ಇರುತ್ತೇನೆ ಎಂದಿದ್ದಾರೆ.