35 ಸೊಮಾಲಿಯಾ ಕಡಲ್ಗಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಭಾರತೀಯ ನೌಕಾಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತೀಯ ನೌಕಾಪಡೆ ಇತ್ತೀಚೆಗೆ ವಶಕ್ಕೆ ಪಡೆದಿದ್ದ 35 ಸೊಮಾಲಿಯಾ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಪೊಲೀಸರಿಗೆ ಒಪ್ಪಿಸಿದೆ.

ಇತ್ತೀಚೆಗೆ, ಭಾರತೀಯ ನೌಕಾಪಡೆಯು ಕಡಲ್ಗಳ್ಳತನ-ವಿರೋಧಿ ಕಾರ್ಯಾಚರಣೆಯಲ್ಲಿ MV ರುಯೆನ್ ಹಡಗಿನ 17 ಸಿಬ್ಬಂದಿಯನ್ನು ರಕ್ಷಿಸಿ, 35 ಸೊಮಾಲಿಯಾ ಕಡಲ್ಗಳ್ಳರನ್ನು ವಶಕ್ಕೆ ಪಡೆದಿತ್ತು.

ಶನಿವಾರದಂದು ಕಡಲ್ಗಳ್ಳರನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿತ್ತು. ಮುಂಬೈನ ನೇವಲ್ ಡಾಕ್‌ಯಾರ್ಡ್‌ನಿಂದ ಕಡಲ್ಗಳ್ಳರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಧ್ಯಕ್ಷ ರುಮೆನ್ ರಾದೇವ್ ಸೇರಿದಂತೆ ಬಲ್ಗೇರಿಯನ್ ನಾಯಕರು ಈ ಕಾರ್ಯಾಚರಣೆಗಾಗಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here