ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಗ್ಯಾರಂಟಿ ಎನ್ನುವ ರಾಜ್ಯ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಟ್ಟದಿಂದ ಕೆಳಗೆ ಇಳಿಯುವುದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಿದ್ದರಾಮಯ್ಯಗೆ ಅವರ ಪಕ್ಷದವರೇ ಸಮಸ್ಯೆಯಾಗುತ್ತಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಬಹುಮತ ಸಾಧಿಸಿದೆ.
ರಾಜ್ಯದಲ್ಲೂ ಬಿಜೆಪಿ 28ಕ್ಕೆ 28 ಸ್ಥಾನವನ್ನು ಗೆಲ್ಲುತ್ತದೆ. ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದರು.
ಈಶ್ವರಪ್ಪ ಅಸಮಾಧಾನ ಕುರಿತಾಗಿ ಮಾತನಾಡಿದ ಅವರು, ಚುನಾವಣೆಗೆ ಇನ್ನೂ ಬಹಳ ಸಮಯ ಇರುವುದರಿಂದ ಕೆಲವೆಡೆ ಗೊಂದಲವಿದೆ. ಅವರು ಸಮಾಧಾನಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.