Saturday, January 10, 2026

ಪ್ರೀತಿಯ ವಿಚಾರಕ್ಕೆ ಕಿರುಕುಳ: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಸಂಭವಿಸಿದೆ.

ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಯುವಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತ ಬಾಲಕಿ ಪೋಷಕರು ಮಾದನಾಯಕನಹಳ್ಳಿ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ.

ಪ್ರಕರಣದ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

error: Content is protected !!