ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ಈ ನಾಲ್ಕು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಇನ್ನು ಪ್ರಕಟವಾಗಿಲ್ಲ. ಕೋಲಾರದ ಟಿಕೆಟ್ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಕಗ್ಗಂಟಾಗಿ ತಲೆನೋವು ತಂದಿದೆ.
ಲೋಕಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೂ ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಂತಿಮಗೊಳ್ಳಬೇಕಿದೆ. ನಿನ್ನೆ ರಾತ್ರಿ ಬಿಡುಗಡೆಯಾದ ಕಾಂಗ್ರೆಸ್ ನಾಲ್ಕನೇ ಪಟ್ಟಿ ಕೂಡ ರಾಜ್ಯದ ಈ ನಾಲ್ಕು ಕ್ಷೇತ್ರಗಳಿಂದ ಒಬ್ಬ ಅಭ್ಯರ್ಥಿಯನ್ನು ಘೋಷಿಸಿಲ್ಲ.
ರಾಜ್ಯದಲ್ಲಿ ಕೋಲಾರ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲ ಮುಂದುವರಿದಿದೆ. ಕೋಲಾರಕ್ಕೆ ಸಚಿವ ಮುನಿಯಪ್ಪ ಹಾಗೂ ರಮೇಶ್ ನಡುವೆ ಮೈತ್ರಿ ಆಪ್ತವಾಗಿತ್ತು. ಸಿಎಂ ಹಾಗೂ ಡಿಸಿಎಂ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲೂ ಒಮ್ಮತದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕೋಲಾರ ಟಿಕೆಟ್ ಘೋಷಣೆ ಕಗ್ಗಂಟಾಗಿ ಹೈಕಮಾಂಡ್ ಮೆಟ್ಟಿಲೇರಿದೆ.