ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದೆ.
ಕೇರಳ ವಿಧಾನಸಭೆಯು ಅಂಗೀಕಾರ ನೀಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕುತ್ತಿಲ್ಲ ಎಂದು ಕೇರಳ ಸರ್ಕಾರ ದೂರಿದೆ.
ಕೇಂದ್ರ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆಸಿಫ್ ಮೊಹಮ್ಮದ್ ಖಾನ್ ಹಾಗೂ ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಈ ಅರ್ಜಿಯಲ್ಲಿ ಪ್ರತಿವಾದಿಗಳು ಎಂದು ಹೆಸರಿಸಲಾಗಿದೆ.
ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 2) ಮಸೂದೆ -2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ – 2022, ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆ – 2022 ಹಾಗೂ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 3) ಮಸೂದೆ – 2022 ರಾಷ್ಟ್ರಪತಿ ಯಾವುದೇ ಕಾರಣ ಉಲ್ಲೇಖಿಸದೆ ಅಂಕಿತ ಹಾಕದೆ ಇದ್ದಾರೆ. ಇದು ಅಸಾಂವಿಧಾನಿಕ ಎಂದು ಕೇರಳ ಸರ್ಕಾರ ಹೇಳಿದೆ.
ರಾಷ್ಟ್ರಪತಿಗಳ ವಿರುದ್ಧವೇ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ.