ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯದ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಹಿನ್ನೆಲೆ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘I.N.D.I.A.’ ‘ಮಹಾ ರ್ಯಾಲಿ’ ನಡೆಸಲಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ , ದೆಹಲಿ ಸಚಿವ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.
ಕೇಜ್ರಿವಾಲ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಸರ್ವಾಧಿಕಾರದ ವಿರುದ್ಧ ಮಾರ್ಚ್ 31 ರಂದು ಬೆಳಿಗ್ಗೆ 10 ಗಂಟೆಗೆ ರ್ಯಾಲಿ ಹಮ್ಮಿಕೊಂಡಿದ್ದು, ದೇಶದ ಜನತೆಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
‘ಮಹಾ ರ್ಯಾಲಿ’ ಕೇಜ್ರಿವಾಲ್ ಅವರನ್ನು ಉಳಿಸಲು ಅಲ್ಲ “ಪ್ರಜಾಪ್ರಭುತ್ವವನ್ನು ಉಳಿಸಲು” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.