ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ, ಮತಬೇಟೆಯಲ್ಲಿ ತೊಡಗಿದ್ದು,ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ಘಟಿಸುತ್ತಿವೆ. ಇದೀಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ FIR ದಾಖಲಾಗಿದೆ.
ಚಿತ್ರದುರ್ಗದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ.