ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ರೆಡ್ಡಿ ಬಲ ಸಿಕ್ಕಿದೆ.ನಾಳೆ ಬಿಜೆಪಿಯೊಂದಿಗೆ ಕೆಆರ್ ಪಿಪಿ ಪಕ್ಷ ವಿಲೀನಕ್ಕೆ ಶಾಸಕ ಜನಾರ್ಧನ ರೆಡ್ಡಿ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯವನ್ನು ಪಡೆದರು.
ಅಂತಿಮವಾಗಿ ನಾಳೆ ಕೆಆರ್ ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅಲ್ಲದೇ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಾಲಿ ಜನಾರ್ಧನ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದೇನೆ. ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳೋದಾಗಿ ತಿಳಿಸಿದರು.