ದಿಗಂತ ವರದಿ ವಿಜಯಪುರ:
ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಬೆಂಕಿಯಿಂದ ಹೊತ್ತಿ ಉರಿದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಹೆದ್ದಾರಿ ಬಳಿ ನಡೆದಿದೆ.
ಚಲಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬೀಳುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಚಾಲಕ, ಕ್ಲೀನರ್ ಪಾರಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯ ಕೆನ್ನಾಲಿಗೆ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.